ಶಿವಣ್ಣ-ರಜನಿ ಚಿತ್ರಕ್ಕೆ ನಾಯಕನಟಿ ಇವರೇ!!

ಭಾರತ ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರ ಮುಂದಿನ ಚಿತ್ರಕ್ಕೆ ರಜನಿಕಾಂತ್ ಹಾಗು ಕರುನಾಡ ಚಕ್ರವರ್ತಿ ಶಿವಣ್ಣ ಒಂದಾಗುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ತಮಿಳಿನ ‘ಡಾಕ್ಟರ್’ ಹಾಗು ‘ಬೀಸ್ಟ್’ ಸಿನಿಮಾ ಖ್ಯಾತಿಯ ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ ಅವರು ಈ ಮೇರುನಟರನ್ನು ನಿರ್ದೇಶಿಸಲಿದ್ದಾರೆ. ತಲೈವ ರಜನಿಕಾಂತ್ ಅವರ 169ನೇ ಚಿತ್ರ ಇದಾಗಿರಲಿದ್ದು, ತಾತ್ಕಾಲಿಕವಾಗಿ ಚಿತ್ರಕ್ಕೆ ‘ತಲೈವರ್169’ ಎಂದು ಹೆಸರು ಕೂಡ ಇಡಲಾಗಿದೆ. ಶಿವಣ್ಣನ ಜೊತೆಗೆ ಒಂದು ಹಂತದ ಮಾತುಕಥೆಯನ್ನು ನೆಲ್ಸನ್ ಮುಗಿಸಿದ್ದಾರೆ ಎಂಬ ಸುದ್ದಿ ಒಂದುಕಡೆಯಾದರೆ ಇದೀಗ […]

ಚಾರ್ಲಿಗೆ ಮನಸೋತ ಸ್ಯಾಂಡಲ್ ವುಡ್ ಕ್ವೀನ್ ಹೇಳಿದ್ದೇನು ನೋಡಿ

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ “777 ಚಾರ್ಲಿ” ಇನ್ನು ಎರಡೇ ದಿನಗಳಲ್ಲಿ ಬಿಡುಗಡೆಯಾಗಲಿದೆ. ಕಿರಣ್ ರಾಜ್ ಕೆ ಅವರು ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಈ ಪ್ಯಾನ್ ಇಂಡಿಯಾ ಸಿನಿಮಾ ಬಿಡುಗಡೆಗೂ ಮೊದಲೇ ಸಾಕಷ್ಟು ಸದ್ದು ಮಾಡುತ್ತಿದೆ. ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು ಸಿನಿಪ್ರಿಯರ ಮನ ಸೆಳೆದಿತ್ತು. ಟೀಸರ್ ನೋಡಿ ಫಿದಾ ಆದ ಸಿನಿಪ್ರಿಯರು ಯಾವಾಗ ಚಿತ್ರ ರಿಲೀಸ್ ಆಗಲಿದೆ ಎಂದು ಕಾಯುತ್ತಿದ್ದಾರೆ. ಇನ್ನು ಚಿತ್ರ ಬಿಡುಗಡೆಯಾಗುವ ಮೊದಲೇ ಪ್ರೀಮಿಯರ್ ಶೋ ನಡೆದಿದ್ದು […]

ಮಚ್ಚೆ ಗೌಡ ಪಕ್ಕಾ ಮನರಂಜನೆ ನೀಡುವ ಪಾತ್ರ – ಚಂದನ್ ಆಚಾರ್

ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಸಿನಿರಂಗದಲ್ಲಿ ನಟನಾ ಛಾಪು ಮೂಡಿಸಿರುವ ಚಂದನ್ ಆಚಾರ್ ರಂಗಭೂಮಿಯ ಮೂಲಕ ನಟನಾ ನಂಟು ಬೆಳೆಸಿಕೊಂಡ ಹುಡುಗ. ಕಿರಿಕ್ ಪಾರ್ಟಿಯಲ್ಲಿ ನಾಯಕ ರಕ್ಷಿತ್ ಶೆಟ್ಟಿ ಸ್ನೇಹಿತ ಆಗಿ ಕಾಣಿಸಿಕೊಂಡಿದ್ದ ಚಂದನ್ ಆಚಾರ್ ಆ ಪಾತ್ರದ ಮೂಲಕ ಕರುನಾಡಿನಾದ್ಯಂತ ಮನೆ ಮಾತಾದರು. ಮುಂದೆ ಗೋಲ್ಡನ್ ಸ್ಟಾರ್‌ ಗಣೇಶ್ ನಟನೆಯ ಮುಗುಳುನಗೆಯಲ್ಲಿಯೂ ನಾಯಕನ ಸ್ನೇಹಿತ ಆಗಿ ನಟಿಸಿರುವ ಚಂದನ್ ಆಚಾರ್ ಪೋಷಕ ಪಾತ್ರದ ಮೂಲಕ ಮನೆ ಮಾತಾದರು. ಮುಂದೆ ಕೆಮಿಸ್ಟ್ರಿ ಆಫ್ ಕರಿಯಪ್ಪ ಸಿನಿಮಾದ ಮೂಲಕ […]

ಸಿನಿಮಾ ನಿರ್ದೇಶಕರಿಗೆ ದುಬಾರಿ ಕಾರು ನೀಡಿದ ಕಮಲ್ ಹಾಸನ್

ಕಮಲ್ ಹಾಸನ್, ವಿಜಯ್ ಸೇತುಪತಿ, ಫಹಾದ್ ಫಾಸಿಲ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ ವಿಕ್ರಮ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸಕತ್ ಸೌಂಡ್ ಮಾಡುತ್ತಿದೆ. ಸಿನಿಮಾ ಬಿಡುಗಡೆಯಾದ ಮೊದಲ ದಿನವೇ 60 ಕೋಟಿ ರೂಗಳಿಗೂ ಅಧಿಕ ಆದಾಯ ಗಳಿಸಿರುವ ವಿಕ್ರಮ್ ಸಿನಿಮಾ ಕೇವಲ ನಾಲ್ಕು ದಿನಗಳಲ್ಲಿ ಗಳಿಸಿದ್ದು ಬರೋಬ್ಬರಿ 175 ಕೋಟಿ ರೂಪಾಯಿ. ವಿಕ್ರಮ್ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ಕಮಲ್ ಹಾಸನ್ ಅವರ ವೃತ್ತಿ ಜೀವನದಲ್ಲಿ ಈ ಸಿನಿಮಾ ಒಂದು ಅಭೂತಪೂರ್ವ ಮೈಲಿಗಲ್ಲನ್ನೇ ಸೃಷ್ಟಿ ಮಾಡಿದೆ. ಹೌದು, […]

ಡಾಲಿಯ ಹೊಸ ಸಿನಿಮಾ ಇದೀಗ ಒಟಿಟಿಗೆ.

‘ನಟರಾಕ್ಷಸ’ ಎಂದೇ ಖ್ಯಾತರಾಗಿರುವ ಡಾಲಿ ಧನಂಜಯ ಅವರು ಸದ್ಯ ಕನ್ನಡದಲ್ಲಿ ಅತ್ಯಂತ ಬ್ಯುಸಿ ಆಗಿರುವ ನಟರಲ್ಲಿ ಒಬ್ಬರು. ಸಾಲು ಸಾಲು ಸಿನಿಮಾಗಳನ್ನು ಕೈಗೆತ್ತಿಕೊಂಡಿರುವ ಡಾಲಿ ಸಾಲು ಸಾಲು ಯಶಸ್ಸುಗಳನ್ನು ಸಹ ಕಂಡಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಅವರ ಹೊಸ ಸಿನಿಮಾ ‘ಟ್ವೆಂಟಿ ಒನ್ ಅವರ್ಸ್’. ಜೈಶಂಕರ್ ಪಂಡಿತ್ ಅವರ ನಿರ್ದೇಶನದಲ್ಲಿ ಮೂಡಿಬಂದಿದ್ದ ಈ ಸಿನಿಮಾ ಜನರನ್ನ ಸೆಳೆಯುವಲ್ಲಿ ಕೊಂಚ ಮಟ್ಟಿಗೆ ವಿಫಲವಾಗಿತ್ತು. ನಾಯಕನಾಗಿ ಪೊಲೀಸ್ ಪಾತ್ರಕ್ಕೆ ಬಣ್ಣ ಹಚ್ಚಿದ್ದ ಧನಂಜಯ ಅವರು ತಮ್ಮ ನಟನೆಯಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾದರೂ, […]

“ಬಿಡುಗಡೆಗೂ ಮುನ್ನವೇ ಚಾರ್ಲಿ ನಮ್ಮನ್ನು ಗೆಲ್ಲಿಸಿದ್ದಾಳೆ”- ರಕ್ಷಿತ್ ಶೆಟ್ಟಿ.

‘777 ಚಾರ್ಲಿ’ ಸಿನಿಮಾದ ಬಗೆಗೆ ಯಾರಿಗೆ ತಾನೇ ಗೊತ್ತಿಲ್ಲ. ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ ಈ ಸಿನಿಮಾ ಇದೇ ಜೂನ್ 10ರಂದು ಪ್ರಪಂಚದಾದ್ಯಂತ ಬಿಡುಗಡೆ ಕಾಣುತ್ತಿದೆ. ಎಲ್ಲೆಡೆ, ಎಲ್ಲ ಭಾಷೆಗಳಲ್ಲೂ ಮುಗಿಲೆತ್ತರದ ನಿರೀಕ್ಷೆಗಳನ್ನು ಪಡೆದಿದೆ ಈ ಸಿನಿಮಾ. ಚೆನ್ನೈ ನಲ್ಲಿ ‘ಚಾರ್ಲಿ’ಯದೇ ಕಟ್-ಔಟ್ ಕೂಡ ತಲೆ ಎತ್ತಿ ನಿಂತಿದೆ. ಈಗಾಗಲೇ ಹಲವಾರು ಕಡೆ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಚಿತ್ರತಂಡ ಆಯೋಜಿಸಿದ್ದ ಪ್ರೀಮಿಯರ್ ಶೋಗಳು ಪ್ರೇಕ್ಷಕರಿಗೆ ನಿಗದಿತ ಸಿನಿಮಾ ಬಿಡುಗಡೆ ದಿನಾಂಕಕ್ಕೂ ಮುನ್ನವೇ ‘ಧರ್ಮ ಹಾಗು ಚಾರ್ಲಿ’ಯ […]

‘ಸಪ್ತ ಸಾಗರದಾಚೆ ಎಲ್ಲೋ’ ಅಲೆ ಎಬ್ಬಿಸಿರುವ ರಕ್ಷಿತ್ ಶೆಟ್ರು ಮತ್ತು ತಂಡ.

ರಕ್ಷಿತ್ ಶೆಟ್ಟಿ ಕನ್ನಡ ಚಿತ್ರರಂಗದ ಹೊಸ ಅಲೆಯ ಸಂಸ್ಥಾಪಕ ಎಂದರೆ ತಪ್ಪಾಗದು. ಒಂದಕ್ಕಿಂತ ಒಂದು ವಿಭಿನ್ನ ಚಿತ್ರಗಳನ್ನು ಕನ್ನಡಿಗರಿಗೆ ನಟನಾಗಿಯೂ, ನಿರ್ದೇಶಕನಾಗಿಯೂ ನೀಡುತ್ತಾ ತನಗಿದ್ದ ಅಭಿಮಾನಿ ಬಳಗವನ್ನು ಹೆಚ್ಚಿಸಿಕೊಳ್ಳುತ್ತಾ ಬಂದಿದ್ದಾರೆ ರಕ್ಷಿತ್. ನಿನ್ನೆಯಷ್ಟೇ(ಜೂನ್ 6) ತಮ್ಮ ಜನುಮದಿನವನ್ನು ಆಚರಿಸಿಕೊಂಡ ಇವರು, ತಮ್ಮ ಹೊಸ ಸಿನಿಮಾದ ಟೀಸರ್ ಅನ್ನು ಲೋಕಾರ್ಪಣೆ ಮಾಡಿದ್ದಾರೆ. ಹೇಮಂತ್ ಎಂ ರಾವ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಟೀಸರ್ ಜೂನ್ 6ರ ಸಂಜೆ 6ಗಂಟೆಗೆ ಬಿಡುಗಡೆಯಾಗಿದೆ. ರಕ್ಷಿತ್ ಶೆಟ್ಟಿ ಹಾಗು […]

ಪ್ರಾಕ್ಟಿಕಲ್ ಹುಡುಗಿಯಾಗಿ ಬರುತ್ತಿದ್ದಾರೆ ದಿವ್ಯಾ ಉರುಡುಗ

ಈಟಿವಿ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಚಿಟ್ಟೆ ಹೆಜ್ಜೆ ಧಾರಾವಾಹಿಯ ಮೂಲಕ ಕಿರುತೆರೆಗೆ ಕಾಲಿಟ್ಟ ದಿವ್ಯಾ ಉರುಡುಗ ಆಕಸ್ಮಿಕವಾಗಿ ಬಣ್ಣದ ನಂಟು ಬೆಳೆಸಿಕೊಂಡ ಚೆಂದುಳ್ಳಿ ಚೆಲುವೆ. ಚಿಟ್ಟೆ ಹೆಜ್ಜೆ ಧಾರಾವಾಹಿಯ ನಂತರ ಅಂಬಾರಿ, ಖುಷಿ, ಓಂ ಶಕ್ತಿ ಓಂ ಶಾಂತಿ ಧಾರಾವಾಹಿಗಳಲ್ಲಿ ಅಭಿನಯಿಸಿರುವ ದಿವ್ಯಾ ಉರುಡುಗ ಕೇವಲ ಕಿರುತೆರೆ ಮಾತ್ರವಲ್ಲದೇ ಹಿರಿತೆರೆಯಲ್ಲಿಯೂ ಮೋಡಿ ಮಾಡಿದ್ದಾರೆ. ಹುಲಿರಾಯ ಸಿನಿಮಾದ ಲಚ್ಚಿಯಾಗಿ ಬೆಳ್ಳಿತೆರೆಯಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದ ದಿವ್ಯಾ ಉರುಡುಗ ಗೆ ಅದೃಷ್ಟ ದೇವತೆ ಅಸ್ತು ಎಂದಿದ್ದರು. ಮುಂದೆ ಧ್ವಜ, ಫೇಸ್ […]

‘ಹೊಂಬಾಳೆ’ಯ ಬಹುನಿರೀಕ್ಷಿತ ಮುಂದಿನ ಸಿನಿಮಾಗಳು..

‘ಹೊಂಬಾಳೆ ಫಿಲಂಸ್’ ಸದ್ಯ ಭಾರತದ ಅತಿದೊಡ್ಡ ಸಿನಿಮಾ ನಿರ್ಮಾಣ ಸಂಸ್ಥೆ ಎಂದು ಗುರುತಿಸಿಕೊಂಡಿದೆ. ‘ಕೆಜಿಎಫ್’ ಚಿತ್ರಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಇದೀಗ ಸಾಲು ಸಾಲು ಚಿತ್ರಗಳನ್ನು ನಿರ್ಮಾಣ ಮಾಡುವ ಭರದಲ್ಲಿದೆ. ಅಪ್ಪಟ ಕನ್ನಡ ಸಿನಿಮಾಗಳಿಂದ ಹಿಡಿದು, ಪಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಲಿರೋ ಚಿತ್ರಗಳವರೆಗೆ ಎಲ್ಲವೂ ಇವರ ಕೈಗಳಲ್ಲಿವೆ. • ‘ಸಲಾರ್’ಸದ್ಯ ‘ಹೊಂಬಾಳೆ ಫಿಲಂಸ್’ ತಂಡ ಬಹುನಿರೀಕ್ಷಿತ ‘ಸಲಾರ್’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಕೊಂಡಿದೆ.ತೆಲುಗಿನ ಪಾನ್ ಇಂಡಿಯನ್ ಸ್ಟಾರ್ ಪ್ರಭಾಸ್ ಅವರನ್ನು ನಾಯಕನಟರಾಗಿ ಹೊಂದಿರುವ ಈ ಸಿನಿಮಾ ತಮ್ಮ ಎರಡನೇ ಸುತ್ತಿನ […]

ಪ್ಯಾನ್ ಇಂಡಿಯಾ ಸಿನಿಮಾ ಟೈಟಲ್ ರಿವೀಲ್ ಮಾಡಿದ ರಿಷಬ್ ಶೆಟ್ಟಿ ಹೇಳಿದ್ದೇನು ಗೊತ್ತಾ?

ಜೊತೆಜೊತೆಯಲಿ ಧಾರಾವಾಹಿಯ ಅನು ಸಿರಿಮನೆ ಈಗ ಹಿರಿತೆರೆಯಲ್ಲಿ ಬ್ಯುಸಿಯಾಗಿದ್ದಾರೆ. ಮೊದಲ ಧಾರಾವಾಹಿಯಲ್ಲಿಯೇ ಕರ್ನಾಟಕದಾದ್ಯಂತ ಮನೆ ಮಾತಾಗಿರುವ ಕರಾವಳಿ ಮೂಲಕ ಕುವರಿ ಮೇಘಾ ಶೆಟ್ಟಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ತ್ರಿಬಲ್ ರೈಡಿಂಗ್ ಸಿನಿಮಾ ಮೂಲಕ ಹಿರಿತೆರೆಗೆ ಹಾರಿದರು. ಡಾರ್ಲಿಂಗ್ ಕೃಷ್ಣ ಜೊತೆಗೆ ದಿಲ್ ಪಸಂದ್ ಎನ್ನುತ್ತಿರುವ ಮೇಘಾ ಶೆಟ್ಟಿ ಸಡಗರ ರಾಘವೇಂದ್ರ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸುತ್ತಿರುವ ವಿಚಾರ ಇತ್ತೀಚೆಗಷ್ಟೇ ಬಹಿರಂಗಗೊಂಡಿತ್ತು. ಕವೀಶ್ ಶೆಟ್ಟಿ ನಾಯಕರಾಗಿ ನಟಿಸುತ್ತಿರುವ ಈ ಸಿನಿಮಾದ ಟೈಟಲ್ ನ್ನು ರಿಷಬ್ ಶೆಟ್ಟಿ […]