ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಲು ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಇಲ್ಲಿನ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಕುಂದ ಶಾಲೆ ಸಮೀಪದಲ್ಲಿ ರವಿವಾರ ತಡರಾತ್ರಿ ನಡೆದಿದೆ.ಆದರೆ ಇಂದು ಬೆಳಗ್ಗೆ ತಿಳಿದು ಬಂದಿದೆ.

ಹತ್ಯೆಯಾದ ಮಹಿಳೆ ಸೊರಬ ನಿವಾಸಿ ಪೂರ್ಣಿಮಾ ಆಚಾರ್ಯ (38) ಎಂದು ತಿಳಿದು ಬಂದಿದೆ. ಕೋಗಾರ್ ನಿವಾಸಿ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎನ್ನಲಾಗಿದೆ.

ಮೂಲತಃ ಸೊರಬ ನಿವಾಸಿ ಆಗಿರುವ ಪೂರ್ಣಿಮಾ ಆಚಾರ್ಯ ಅವರು ಕಳೆದ ಹದಿನಾರು ವರ್ಷಗಳ‌ ಹಿಂದೆ ಕೋಗಾರ್ ಮೂಲದ ರವಿ ಆಚಾರ್ಯ ಅವರೊಂದಿಗೆ ವಿವಾಹವಾಗಿದ್ದರು‌. ಟಿಪ್ಪರ್ ಚಾಲಕನಾಗಿರುವ ರವಿ ಹೆಮ್ಮಾಡಿ ಸಮೀಪದ ಬಗ್ವಾಡಿಯಲ್ಲಿ ಟಿಪ್ಪರ್ ಚಾಲಕನಾಗಿ ದುಡಿಯುತ್ತಿದ್ದು, ಪತಿ ಹಾಗೂ ಪತ್ನಿ ತಮ್ಮ ಎರಡು ಮಕ್ಕಳೊಂದಿಗೆ ಮೊದಲು ಇಲ್ಲಿಯೇ ನೆಲೆಸಿದ್ದರು.

ಅತೀಯಾದ ಕುಡಿತದ ಚಟ ಹೊಂದಿರುವ ರವಿ ಕುಡಿದು ಆಗಾಗ್ಗೆ ಗಲಾಟೆ ಮಾಡುತ್ತಿದ್ದು, ಪತ್ನಿಗೂ ಕಿರುಕುಳ ನೀಡುತ್ತಿದ್ದನು. ಈ ಹಿನ್ನೆಲೆ ಮನೆಯವರು ಮಾತುಕತೆ ನಡೆಸಿ ಆ ಬಳಿಕ ಪತಿಯಿಂದ‌ ದೂರ ಉಳಿದುಕೊಂಡಿದ್ದ ಪತ್ನಿ ಪೂರ್ಣಿಮಾ ತಮ್ಮ ಇಬ್ಬರು ಮಕ್ಕಳೊಂದಿಗೆ ತಾಯಿಯ ಮನೆ ಸೊರಬದಲ್ಲಿ ನೆಲೆಸಿದ್ದರು ಎಂದು ಮಾಹಿತಿ ತಿಳಿಯಲಾಗಿದೆ. ಈ ಘಟನಾ ಸ್ಥಳಕ್ಕೆ ಠಾಣಾಧಿಕಾರಿ ಪವನ್ ನಾಯ್ಕ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.ಪೊಲೀಸರು ಈ ಪ್ರಕರಣವನ್ನು ವಿಚಾರಣೆ ನಡೆಸುತ್ತಿದ್ದಾರೆ.

Share via
Copy link
Powered by Social Snap